ಸಮುವೇಲ್||Samuel Kannada biblical Movie|| ಸಮುವೇಲ್ ಕನ್ನಡ ಮೂವಿ#kannada#movie#love
FAITHFULLY LIFE OF HOLINESS
0:00 / 0:00
ಸಮುವೇಲ್||Samuel Kannada biblical Movie|| ಸಮುವೇಲ್ ಕನ್ನಡ ಮೂವಿ#kannada#movie#love
6 253 просмотра · 1 г. назад
FAITHFULLY LIFE OF HOLINESS
275 подписчиков
6 253 просмотра · 1 г. назад
this movie copyright from english Samuel prophet
Kannada own vocal creats from all this from
and in this movie have small mistake from me I am use word of Christ sorry for this
copyright from bgm all
ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು. ಮಗನು ಇನ್ನೂ ಚಿಕ್ಕವನಾಗಿದ್ದನು. 25 ಅವರು ಹೋರಿಯನ್ನು ಯಜ್ಞಮಾಡಿದ ಮೇಲೆ ಮಗನನ್ನು ಏಲಿಯ ಬಳಿಗೆ ಕರೆದುಕೊಂಡು ಬಂದರು. 26 ಹನ್ನಳು ಏಲಿಗೆ “ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ, ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ. 27 ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ; 28 ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು” ಎಂದು ಹೇಳಿದಳು. ಆ ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು.
ನೆರವೇರುವುದೆಂಬುದಕ್ಕೆ ನಿನ್ನ ಮಕ್ಕಳಾದ ಹೊಫ್ನಿ ಹಾಗೂ ಫೀನೆಹಾಸರು ಒಂದೇ ದಿನದಲ್ಲಿ ಸಾಯುವುದೇ ಗುರುತಾಗಿರುವುದು. 35 ನನ್ನ ಹೃದಯದ ಹಾಗೂ ಮನಸ್ಸಿನ ಆಲೋಚನೆಗಳನ್ನು ನೆರವೇರಿಸುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತ ಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.’ 36 ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡ ಬಿದ್ದು, ನಮಗೆ ಒಂದು ಬೆಳ್ಳಿಕಾಸನ್ನು hರೊಟ್ಟಿಯ ಚೂರನ್ನು ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ಯಾಜಕನ ಸೇವೆಯಲ್ಲಿ ಯಾವುದಕ್ಕಾದರೂ ನಮ್ಮನ್ನು ಸೇರಿಸಿಕೋ” ಎಂದು ಅವನನ್ನು ಬೇಡಿಕೊಳ್ಳುವರು, ಎಂದು ಹೇಳಿದನು.
4ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯಮಾಡಿಕೊಂಡರು; ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು. 2 ಇವರು ಇಸ್ರಾಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಲು ಇಸ್ರಾಯೇಲರು ಸೋತರು; ಫಿಲಿಷ್ಟಿಯರು ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಾಯೇಲರನ್ನು ಸಂಹರಿಸಿದರು. 3 ಇಸ್ರಾಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರ ಹಿರಿಯರು ಅವರಿಗೆ, “ಯೆಹೋವನು ಈ ಹೊತ್ತು ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶೀಲೋವಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸೋಣ; ಆತನು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ತಪ್ಪಿಸಲಿ” ಎಂದು ಆಲೋಚನೆ ಹೇಳಿದ್ದರಿಂದ ಅವರು ಜನರನ್ನು ಕಳುಹಿಸಿ 4 aಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೇನಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು. 5 ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲಾ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು. 6 ಫಿಲಿಷ್ಟಿಯರು ಇದನ್ನು ಕೇಳಿ, “ಇಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೇನು ಕಾರಣ” ಎಂದು ವಿಚಾರಿಸುವಲ್ಲಿ ಯೆಹೋವನ ಮಂಜೂಷವು ಪಾಳೆಯದಲ್ಲಿ ಬಂದದ್ದೇ ಕಾರಣವೆಂದು ತಿಳಿದುಕೊಂಡರು. 7 ದೇವರು ಇವರ ಪಾಳೆಯಕ್ಕೆ ಬಂದಿದ್ದಾನಲ್ಲಾ ಎಂದು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟು, “ಅಯ್ಯೋ! ಮುಂಚೆ ಹೀಗಾಗಿರಲ್ಲಿಲ್ಲ. 8 ಅಯ್ಯೋ! ಪರಾಕ್ರಮವುಳ್ಳ ಈ ದೇವರ ಕೈಯಿಂದ ನಮ್ಮನ್ನು ಬಿಡಿಸುವವರು ಯಾರು? ಐಗುಪ್ತ್ಯರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೋ! 9 bಫಿಲಿಷ್ಟಿಯರೇ, ಬಲಗೊಳ್ಳಿರಿ, ಶೂರರಾಗಿರಿ; ನಿಮಗೆ ದಾಸರಾಗಿದ್ದ ಇಬ್ರಿಯರಿಗೆ ನೀವೇ ದಾಸರಾದೀರಿ. ಆದಕಾರಣ ಶೌರ್ಯದಿಂದ ಯುದ್ಧಮಾಡಬೇಕು” ಎಂದು ಹೇಳಿಕೊಂಡು 10 ಫಿಲಿಷ್ಟಿಯರು ಯುದ್ಧಮಾಡಲು ಇಸ್ರಾಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು. 11 cದೇವರ ಮಂಜೂಷವು ಶತ್ರುವಶವಾಯಿತು; ಏಲಿಯ ಮಕ್ಕಳಾದ ಹೊಫ್ನಿಯೂ ಮತ್ತು ಫೀನೆಹಾಸನೂ ಹತರಾದರು.
ಏಲಿಯ ಮರಣ
12 ಅದೇ ದಿನ ಒಬ್ಬ ಬೆನ್ಯಾಮೀನನು ರಣರಂಗದಿಂದ ತಪ್ಪಿಸಿಕೊಂಡು dತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ಶೀಲೋವಿಗೆ ಬಂದು 13 ನಡೆದದ್ದನ್ನು ತಿಳಿಸಲಾಗಿ ಜನರೆಲ್ಲಾ ಗೋಳಾಡತೊಡಗಿದರು. ದೇವರ ಮಂಜೂಷವೇನಾಯಿತೋ ಎಂಬ ಚಿಂತೆಯಿಂದ ಮಂದಿರದ್ವಾರದ ಬಳಿಯಲ್ಲಿ ಆಸೀನನಾಗಿ ದಾರಿಯನ್ನು ನೋಡುತ್ತಿದ್ದ ಏಲಿಯು ಆ ದುಃಖದ ಧ್ವನಿಯನ್ನು ಕೇಳಿ 14 ಈ ಗದ್ದಲವೇನೆಂದು ವಿಚಾರಿಸಲು ಒಡನೆ ಆ ಮನುಷ್ಯನು ಏಲಿಯ ಬಳಿಗೆ ಬಂದು ನಡೆದದ್ದೆಲ್ಲವನ್ನೂ ತಿಳಿಸಿದನು. ಏಲಿಯು ತೊಂಭತ್ತೆಂಟು ವರ್ಷದವನು; 15 ಕಣ್ಣುಗಳು ಇಂಗಿಹೋಗಿ ಕುರುಡನಾಗಿದ್ದನು. 16 ಆ ಮನುಷ್ಯನು ಏಲಿಗೆ, “ನಾನು ರಣರಂಗದಲ್ಲಿದ್ದವನು; ಈ ಹೊತ್ತೇ ಅಲ್ಲಿಂದ ಓಡಿಬಂದೆನು” ಅನ್ನಲು ಏಲಿಯು ಅವನನ್ನು, “ನನ್ನ ಮಗನೇ, ವರ್ತಮಾನವೇನು?” ಎಂದು ಕೇಳಿದನು. 17 ಅವನು ಏಲಿಗೆ, “ಇಸ್ರಾಯೇಲರು ಫಿಲಿಷ್ಟಿಯರಿಗೆ ಬೆನ್ನುತೋರಿಸಿದರು; ಮಹಾಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸರು ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು” ಎಂದು ತಿಳಿಸಿದನು. 18 ಮುದುಕನೂ, ಸ್ಥೂಲಕಾಯನೂ ಆದ ಏಲಿಯು ದೇವರ ಒಡಂಬಡಿಕೆಯ ಮಂಜೂಷದ ವರ್ತಮಾನವನ್ನು ಕೇಳಿದೊಡನೆಯೇ ಪೀಠದಿಂದ ಹಿಂದಕ್ಕೆ ಬಾಗಿಲಿನ ಕಡೆಗೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಅವನು ಇಸ್ರಾಯೇಲರನ್ನು ನಲ್ವತು ವರ್ಷ ಪಾಲಿಸಿದ್ದನು.
19 ಅವನ ಸೊಸೆಯಾದ ಫೀನೆಹಾಸನ ಹೆಂಡತಿ ದಿನತುಂಬಿದ ಗರ್ಭಿಣಿಯಾಗಿದ್ದಳು. ಅವಳು ದೇವರ ಮಂಜೂಷವು ಶತ್ರು ವಶವಾಯಿತೆಂಬ ವರ್ತಮಾನವನ್ನೂ, ತನ್ನ ಮಾವನೂ, ತನ್ನ ಗಂಡನೂ ಹತರಾದದ್ದನ್ನೂ ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು. 20 ಆಕೆಯು ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಸ್ತ್ರೀಯರು, “ಭಯಪಡಬೇಡ, ಮಗನನ್ನು ಹಡೆದಿರುವೆ” ಎಂದು ಹೇಳಿದರು. ಆಕೆಯು ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ, ಪ್ರತ್ಯುತ್ತರಕೊಡಲಿಲ್ಲ. 21 ದೇವರ ಮಂಜೂಷವು ಶತ್ರುವಶವಾದ್ದರಿಂದಲೂ, ಮಾವನೂ, ಗಂಡನೂ ಮೃತರಾದ್ದರಿಂದಲೂ, “ಮಹಿಮೆಯು ಇಸ್ರಾಯೇಲರನ್ನು ಬಿಟ್ಟು ಹೋಯಿತೆಂದು ಹೇಳಿ ಆ ಕೂಸಿಗೆ eಈಕಾಬೋದ್” ಎಂದು ಹೆಸರಿಟ್ಟಳು. 22 “ದೇವರ ಮಂಜೂಷವು ಶತ್ರುವಶವಾದ್ದರಿಂದಲೇ ಇಸ್ರಾಯೇಲರ ಮಹಿಮೆಯು ಹೊರಟುಹೋಯಿತೆಂದು” ಹೇಳಿದಳು.
ಏಲಿಯು ಅದನ್ನು ಕೇಳಿ, g“ಆತನು ಯೆಹೋವನು; ತನಗೆ ಸರಿಕಾಣುವುದನ್ನು ಮಾಡಲಿ” ಎಂದನು.
19 ಸಮುವೇಲನು ದೊಡ್ಡವನಾಗುತ್ತಾ ಬಂದನು. ಯೆಹೋವನು ಅವನೊಡನೆ ಇದ್ದುದ್ದರಿಂದ hಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ. 20 ಯೆಹೋವನು ಅವನನ್ನು ತನ್ನ ಪ್ರವಾದಿಯನ್ನಾಗಿ ನೇಮಿಸಿಕೊಂಡದ್ದು ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರಾಯೇಲರಿಗೆ ಗೊತ್ತಾಯಿತು. 21 ಯೆಹೋವನು ಶೀಲೋವಿನಲ್ಲಿ ದರ್ಶನಕೊಡುವುದಕ್ಕೆ ಪ್ರಾರಂಭಿಸಿ ತನ್ನ ವಾಕ್ಯದಿಂದ ಸಮುವೇಲನಿಗೆ ತನ್ನನ್ನು ಪ್ರಕಟಿಸಿಕೊಳ್ಳುತ್ತಾ ಬಂದನು. ಸಮುವೇಲನು ಇಸ್ರಾಯೇಲರೆಲ್ಲರಿಗೆ ದೈವೋತ್ತರಗಳನ್ನು ತಿಳಿಸುತ್ತಿದ್ದನು.
5ಫಿಲಿಷ್ಟಿಯರು ದೇವರ ಮಂಜೂಷವನ್ನು ಎಬೆನೆಜೆರಿನಿಂದ ಅಷ್ಡೋದಿನಲ್ಲಿರುವ 2 aದಾಗೋನನ ಗುಡಿಗೆ ತೆಗೆದುಕೊಂಡು ಹೋಗಿ ಅಲ್ಲಿ ದಾಗೋನನ ಮಗ್ಗುಲಲ್ಲೇ ಇಟ್ಟರು. 3 ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡಲಾಗಿ bದಾಗೋನ್ ವಿಗ್ರಹವು ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿರುವುದನ್ನು ಕಂಡು ಅದನ್ನು ಎತ್ತಿ ತಿರುಗಿ ಅದರ ಸ್ಥಳದಲ್ಲಿಟ್ಟರು. 4 ಮಾರನೆಯ ದಿನ ಬೆಳಿಬರುವವರೆಲ್ಲರೂ cಅಷ್ಡೋದಿನ ಗುಡಿಯ ಹೊಸ್ತಿಲನ್ನು