Перейти к содержимому

ನಾವು ಪಾಪಕ್ಕೆ ಬಾಗಿಲುಗಳನ್ನು ಹೇಗೆ ತೆರೆಯುತ್ತೇವೆ? || How do we open doors for sin? || PS. SARITA

KINGDOM OF GOD CHURCH GULBARGA

0:00 / 0:00

ನಾವು ಪಾಪಕ್ಕೆ ಬಾಗಿಲುಗಳನ್ನು ಹೇಗೆ ತೆರೆಯುತ್ತೇವೆ? || How do we open doors for sin? || PS. SARITA

81 просмотр · 2 нед. назад
KINGDOM OF GOD CHURCH GULBARGA
1,77 тыс. подписчиков
81 просмотр · 2 нед. назад
KINGDOM OF GOD CHURCH GULBARGA ನಾವು ಪಾಪಕ್ಕೆ ಬಾಗಿಲುಗಳನ್ನು ಹೇಗೆ ತೆರೆಯುತ್ತೇವೆ? || How do we open doors for sin? || PS. SARITA ಮರುವರುಷ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆಹಾಕಿದರು. ದಾವೀದನು ಯೆರೂಸಲೇವಿುನಲ್ಲಿಯೇ ಇದ್ದನು. ಅವನು ಒಂದು ದಿವಸ ಸಂಜೇ ಹೊತ್ತಿನಲ್ಲಿ ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿರುವಾಗ ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವದನ್ನು ಕಂಡನು. 2 ಸಮುವೇಲನು 11:1-2 ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ. 1 ಪೇತ್ರನು 5:8 ಕೂಡಲೆ ದಾವೀದನು ಒಬ್ಬನನ್ನು ಕರೆದು ಆ ಸ್ತ್ರೀ ಯಾರೆಂದು ಕೇಳಲು ಅವನು – ಆಕೆಯು ಎಲೀಯಾಮನ ಮಗಳೂ ಹಿತ್ತಿಯನಾದ ಊರೀಯನ ಹೆಂಡತಿಯೂ ಆಗಿರುವ ಬತ್ಷೆಬೆಯಲ್ಲವೋ ಎಂದು ಉತ್ತರ ಕೊಟ್ಟನು. ಆಗ ದಾವೀದನು ಆಗಲೇ ಋತುಸ್ನಾನಮಾಡಿಕೊಂಡಿದ್ದ ಆಕೆಯನ್ನು ದೂತರ ಮುಖಾಂತರವಾಗಿ ಕರೇಕಳುಹಿಸಿದನು; ಆಕೆಯು ಬರಲು ಆಕೆಯನ್ನು ಕೂಡಿದನು. ಅನಂತರ ಆಕೆಯು ತನ್ನ ಮನೆಗೆ ಹೋದಳು. ಆಕೆಯು ತಾನು ಗರ್ಭಧರಿಸಿದ್ದು ಗೊತ್ತಾದಾಗ ದಾವೀದನಿಗೆ ವರ್ತಮಾನ ಕಳುಹಿಸಿದಳು. 2 ಸಮುವೇಲನು 11:3-5 ಪ್ರಕಾಶಕ್ಕೆ ಬಾರದ ಯಾವ ರಹಸ್ಯವೂ ಇಲ್ಲ; ಮತ್ತು ಗೊತ್ತಾಗದೆ ಬೈಲಿಗೆ ಬಾರದೆ ಇರುವಂಥ ಗುಟ್ಟು ಒಂದೂ ಇಲ್ಲ. ಲೂಕ 8:17 ಯಾವನಾದರೂ ಪಾಪಮಾಡುವದಕ್ಕೆ ಪ್ರೇರೇಪಿಸಲ್ಪಡುವಾಗ – ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ದೇವರು ಕೆಟ್ಟದ್ದಕ್ಕೇನೂ ಸಂಬಂಧಪಟ್ಟವನಲ್ಲ; ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸುವದಿಲ್ಲ. ಆದರೆ ಪ್ರತಿಯೊಬ್ಬನೂ ತನ್ನಲ್ಲಿರುವ ಆಶಾಪಾಶದಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಪ್ರೇರೇಪಿಸಲ್ಪಡುತ್ತಾನೆ. ಆಮೇಲೆ ಆಶೆಯು ಬಸುರಾಗಿ ಪಾಪವನ್ನು ಹೆರುತ್ತದೆ; ಪಾಪವು ತುಂಬಾ ಬೆಳೆದು ಮರಣವನ್ನು ಹಡೆಯುತ್ತದೆ. ಯಾಕೋಬ 1:13-15 ಒಡನೆ ದಾವೀದನು ದೂತರ ಮುಖಾಂತರವಾಗಿ ಯೋವಾಬನಿಗೆ – ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು ಎಂದು ಆಜ್ಞಾಪಿಸಿದನು. ಅವನು ಊರೀಯನನ್ನು ಕಳುಹಿಸಿದನು. ಊರೀಯನು ಬಂದಾಗ ದಾವೀದನು – ಯೋವಾಬನೂ ಸೈನ್ಯದವರೂ ಹೇಗಿರುತ್ತಾರೆ? ಯುದ್ಧವು ಹೇಗೆ ನಡೆದದೆ ಎಂದು ವಿಚಾರಿಸಿದನಂತರ ಅವನಿಗೆ – 2 ಸಮುವೇಲನು 11:6-7 ಮನೆಗೆ ಹೋಗಿ ಕೈಕಾಲು ತೊಳೆದುಕೋ ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೇ ಅರಸನ ಭೋಜನ ಪದಾರ್ಥಗಳೂ ಹೋದವು. ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಸನ ಸೇವಕರೊಡನೆ ಅರಮನೆಯ ಬಾಗಲಲ್ಲೇ ಮಲಗಿಕೊಂಡನು. ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಇವನು ಅವನಿಗೆ – ನೀನು ಪ್ರಯಾಣಮಾಡಿಕೊಂಡು ಬಂದಿಯಲ್ಲಾ; ಯಾಕೆ ಮನೆಗೆ ಹೋಗಲಿಲ್ಲ ಅಂದನು. ಅದಕ್ಕೆ ಊರೀಯನು – ಒಡಂಬಡಿಕೆಯ ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ ಅವನ ಸೇವಕರೂ ಬೈಲಿನಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಹೀಗಿರುವಲ್ಲಿ ನಾನು ನನ್ನ ಮನೆಗೆ ಹೋಗಿ ಉಂಡು ಕುಡಿದು ಹೆಂಡತಿಯೊಡನೆ ಮಲಗಿಕೊಳ್ಳುವದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದನ್ನು ಮಾಡುವದೇ ಇಲ್ಲ ಎಂದು ಉತ್ತರಕೊಟ್ಟನು. 2 ಸಮುವೇಲನು 11:8-11 ಆಗ ದಾವೀದನು ಅವನಿಗೆ – ನೀನು ಈ ಹೊತ್ತು ಇಲ್ಲೇ ಇರು, ನಾಳೆ ನಿನ್ನನ್ನು ಕಳುಹಿಸುತ್ತೇನೆ ಎಂದು ಆಜ್ಞಾಪಿಸಿದನು. ಆದದರಿಂದ ಊರೀಯನು ಆ ದಿನ ಯೆರೂಸಲೇವಿುನಲ್ಲೇ ಇದ್ದನು. ಮರುದಿನ ದಾವೀದನು ಅವನನ್ನು ಅನ್ನಪಾನ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರಕೊಂಡುಹೋಗಿ ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ತನ್ನ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿ ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ. 2 ಸಮುವೇಲನು 11:12-13 Kingdom of God church Gulbarga Location📌 👇 https://maps.app.goo.gl/tMJNhfFHUbcyk... Editing by #DunamisProduction For Prayer and Counselling Requests, Contact us On : 9632743777 Kindly like, share & Subscribe 🙌🙌