ಕುಂದಗೋಳ ತಾಲೂಕು ಶಿರೂರು ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತಹಶೀಲ್ದಾರ್ ವಾಹನ ತಡೆದು ಗ್ರಾಮಸ್ಥರ ಆಕ್ರೋಶ!
NEWS 83 KARNATAKA
0:00 / 0:00
ಕುಂದಗೋಳ ತಾಲೂಕು ಶಿರೂರು ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತಹಶೀಲ್ದಾರ್ ವಾಹನ ತಡೆದು ಗ್ರಾಮಸ್ಥರ ಆಕ್ರೋಶ!
194 просмотра · 1 мес. назад
NEWS 83 KARNATAKA
171 подписчик
194 просмотра · 1 мес. назад
ಕುಂದಗೋಳ ತಾಲೂಕು ಶಿರೂರು ಗ್ರಾಮದಲ್ಲಿ ಕುಡಿಯುವ ನೀರಿಗಾಗಿ
ತಹಶೀಲ್ದಾರ್ ವಾಹನ ತಡೆದು ಗ್ರಾಮಸ್ಥರ ಆಕ್ರೋಶ!
ಹಲವು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಶಿರೂರು ಗ್ರಾಮದ ನವಗ್ರಾಮದ ನಿವಾಸಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಶಿರೂರು ಮಾರ್ಗವಾಗಿ ತೆರಳುತ್ತಿದ್ದ ಕುಂದಗೋಳ ತಹಶೀಲ್ದಾರ್ ರಾಜು ಮಾವರ್ಕರ್ ಅವರ ವಾಹನವನ್ನು
ಮಹಿಳೆಯರು ಸೇರಿದಂತೆ ಗ್ರಾಮಸ್ಥರು ತಡೆದು, ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿದರು.
ಸ್ಥಳೀಯ ಆಡಳಿತ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು
, ಅಧಿಕಾರಿಗಳನ್ನು ಪ್ರಶ್ನಿಸಿದರೆ ಉಡಾಫೆಯ ಉತ್ತರ ನೀಡಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.
ಅಹವಾಲು ಆಲಿಸಿದ
ತಹಶೀಲ್ದಾರ್, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ
ನಡೆಸಿದರು. ಬಳಿಕ ಸಮಸ್ಯಾತ್ಮಕ
ಶೀಘ್ರ ಬಗೆಹರಿಯದಿದ್ದರೆ ಜಿಲ್ಲಾ ಅಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ
ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.