Перейти к содержимому

ಮಂಡ್ಯ ::ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇ.ಡಿ ದಾಳಿ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ.

Aj News Network

0:00 / 0:00

ಮಂಡ್ಯ ::ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇ.ಡಿ ದಾಳಿ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ.

2 231 просмотр · 2 недели назад
Aj News Network
870 подписчиков
2 231 просмотр · 2 недели назад
ಸತೀಶ್ ಜಾರಕಿಹೊಳಿ ಮನೆ ಮೇಲೆ ಇ.ಡಿ ದಾಳಿ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರ ರಾಜಕೀಯ ಏಳಿಗೆ ಸಹಿಸದ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸಿರುವ ದಾಳಿಯನ್ನು ಖಂಡಿಸಿ, ಸತೀಶ್ ಜಾರಕಿಹೊಳಿ ಅಭಿಮಾನಿ ಬಳಗ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.. ಸಚಿವ ಸತೀಶ್ ಜಾರಕಿಹೊಳಿ ಅಭಿಮಾನಿ ಬಳಗದ ಅಧ್ಯಕ್ಷ ರವಿ ಮಳವಳ್ಳಿ ನೇತೃತ್ವದಲ್ಲಿ ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಜಮಾಯಿಸಿ, ಸತೀಶ್ ಜಾರಕಿಹೊಳಿ ಅವರನ್ನು ಮಾನಸಿಕವಾಗಿ ಕುಗ್ಗಿಸಲು ಬಿಜೆಪಿ ನಡೆಸಿರುವ ಷಡ್ಯಂತ್ರ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.. ಪ್ರತಿಭಟನೆಯಲ್ಲಿ ಕೆಪಿಸಿಸಿ ಒಬಿಸಿ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಕೀಲ ಕನ್ನಂಬಾಡಿ ಕುಮಾರ್, ಪುರಸಭೆ ಮಾಜಿ ಸದಸ್ಯ ಶಿವಕುಮಾರ್, ಮುಖಂಡರಾದ ಆಟೋ ಮಂಜಣ್ಣ, ಸ್ವಾಮಿ, ಕುಮಾರ್, ಸತ್ಯ, ಮಂಜು, ಕೃಷ್ಣ ನಾಯಕ್ ಸೇರಿದಂತೆ ನೂರಾರು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.#mandya #mandyanews #congress #satishjarkiholi