Перейти к содержимому

ಕಾನೂನು ಸುವ್ಯವಸ್ಥೆ ಕಾಯಲು ತಮ್ಮ ಪ್ರಾಣ ಅರ್ಪಿಸಿದ ಪೊಲೀಸ್ ಸಿಬ್ಬಂದಿಯ ಸ್ಮರಣೆ

DD Chandana News

0:00 / 0:00

ಕಾನೂನು ಸುವ್ಯವಸ್ಥೆ ಕಾಯಲು ತಮ್ಮ ಪ್ರಾಣ ಅರ್ಪಿಸಿದ ಪೊಲೀಸ್ ಸಿಬ್ಬಂದಿಯ ಸ್ಮರಣೆ

283 просмотра · 1 день назад
DD Chandana News
112 тыс. подписчиков
283 просмотра · 1 день назад
ದೇಶದ ಆಂತರಿಕ ಭದ್ರತೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ಪೊಲೀಸ್ ಸಿಬ್ಬಂದಿಯ ತ್ಯಾಗ ಮತ್ತು ಸೇವೆಯನ್ನು ಸ್ಮರಿಸುವ ಹುತಾತ್ಮ ದಿನಾಚರಣೆ ಇಂದು ಬಳ್ಳಾರಿಯ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆ ಮೈದಾನದಲ್ಲಿ ನಡೆಯಿತು. ನ್ಯಾಯಾಧೀಶ ಸಿದ್ದಲಿಂಗ ಪ್ರಭು, ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಹೊಸಮನಿ, ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಗಣ್ಯರು ಹುತಾತ್ಮರ ಸ್ಮಾರಕಕ್ಕೆ ಹೂ ಗುಚ್ಚವಿರಿಸಿ ಗೌರವ ನಮನ ಸಲ್ಲಿಸಿದರು. ಈ ವೇಳೆ ಹುತಾತ್ಮರ ಆತ್ಮಕ್ಕೆ ಶಾಂತಿ‌ ಕೋರಿ ಗಾಳಿಯಲ್ಲಿ ಮೂರು ಸುತ್ತು ಕುಶಾಲ ತೋಪು ಹಾರಿಸಿ ಮೌನಾಚರಣೆ ಸಲ್ಲಿಸಲಾಯಿತು. WATCH ನ್ಯಾಯಮೂರ್ತಿ ಸಿದ್ದಲಿಂಗ ಪ್ರಭು, ಪೊಲೀಸ್ ಇಲಾಖೆ ಮತ್ತು ನ್ಯಾಯಾಂಗ ಇಲಾಖೆ ಪರಸ್ಪರ ಪೂರಕ ಕೆಲಸ ಮಾಡಿದರೆ, ಕಾನೂನು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬಹುದು ಎಂದು ಹೇಳಿದರು. HOLD ಬಳಿಕ ಕಾರ್ಯಕ್ರಮದಲ್ಲಿ ಡಾ.ಸುಮನ್ ಡಿ.ಪನ್ನೇಕರ್, ಚೀನಾ ಸೈನಿಕರ ದಾಳಿಗೆ 1959ರ ಅಕ್ಟೋಬರ್ 21ರಂದು ಲಡಾಖ್‌ನಲ್ಲಿ 10 ಮಂದಿ ಭಾರತೀಯ ಪೊಲೀಸ್ ಸಿಬ್ಬಂದಿ ಹುತಾತ್ಮರಾದರು. 9 ಮಂದಿ ಜವಾನರನ್ನು ಸೆರೆಹಿಡಿಯಲಾಗಿತ್ತು. ಈ ಘಟನೆಯ ಸ್ಮರಣಾರ್ಥವಾಗಿ ಅಕ್ಟೋಬರ್ 21ರಂದು ಪೊಲೀಸ್ ಹುತಾತ್ಮ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷ ದೇಶದಲ್ಲಿ 154 ಜನ‌ ಹಾಗೂ ರಾಜ್ಯದಲ್ಲಿ ಐದು ಮಂದಿ ಪೊಲೀಸ್ ಅಧಿಕಾರಿಗಳು ಹಾಗು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಸೇವೆ ವೇಳೆ ಹುತಾತ್ಮರಾದ ಪೊಲೀಸ್ ಸಿಬ್ಬಂದಿಯನ್ನು ಸ್ಮರಿಸಿ ಗೌರವ ಸೂಚಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ ಎಂದರು. HOLD