Перейти к содержимому

ವಕೀಲರ ರಕ್ಷಣಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಒತ್ತಾಯಿಸಿ ಕಾರ್ಯಕಲಾಪ ಬಹಿಷ್ಕರಿಸಿ ಬೃಹತ್ ಪ್ರತಿಭಟನೆ

One News Kannada

0:00 / 0:00

ವಕೀಲರ ರಕ್ಷಣಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಒತ್ತಾಯಿಸಿ ಕಾರ್ಯಕಲಾಪ ಬಹಿಷ್ಕರಿಸಿ ಬೃಹತ್ ಪ್ರತಿಭಟನೆ

16 просмотров · 4 дн. назад
One News Kannada
24 подписчика
16 просмотров · 4 дн. назад
ವಕೀಲರ ರಕ್ಷಣಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಒತ್ತಾಯಿಸಿ ಆನೇಕಲ್‌ನಲ್ಲಿ ವಕೀಲರಿಂದ ಕಾರ್ಯಕಲಾಪ ಬಹಿಷ್ಕರಿಸಿ ಬೃಹತ್ ಪ್ರತಿಭಟನೆ ಆನೇಕಲ್: ರಾಜ್ಯದಲ್ಲಿ ವಕೀಲರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ, ಮಾರಣಾಂತಿಕ ದಾಳಿ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ, ವಕೀಲರ ರಕ್ಷಣಾ ಕಾಯ್ದೆಯನ್ನು ತಕ್ಷಣವೇ ಬಲಪಡಿಸಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕೆಂದು ಆಗ್ರಹಿಸಿ ಆನೇಕಲ್ ತಾಲ್ಲೂಕಿನ ವಕೀಲರು ನ್ಯಾಯಾಲಯದ ಕಲಾಪಗಳಿಂದ ದೂರ ಉಳಿದು ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯಾದ್ಯಂತ ಏಕಕಾಲದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯ ಭಾಗವಾಗಿ, ದಿ ಅಡ್ವೊಕೇಟ್ಸ್ ಅಸೋಸಿಯೇಷನ್ ಆಫ್ ಆನೇಕಲ್ ವತಿಯಿಂದ ಆನೇಕಲ್ ನ್ಯಾಯಾಲಯದ ಆವರಣದಲ್ಲಿ ನೂರಾರು ವಕೀಲರು ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಆನೇಕಲ್ ವಕೀಲರ ಸಂಘದ ಪದಾಧಿಕಾರಿಗಳು ಮಾನ್ಯ ಮುಖ್ಯಮಂತ್ರಿಗಳಿಗೆ ತಹಶೀಲ್ದಾರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ವೈ. ಪ್ರಕಾಶ್, "ವಕೀಲರ ಮೇಲಿನ ದೌರ್ಜನ್ಯಗಳು ದಿನೇದಿನೇ ಹೆಚ್ಚಾಗುತ್ತಿವೆ. ವಕೀಲರ ರಕ್ಷಣಾ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಬಾರದ ಕಾರಣ ವಕೀಲರಿಗೆ ಸೂಕ್ತ ಭದ್ರತೆ ಇಲ್ಲದಂತಾಗಿದೆ. ರಕ್ಷಣಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ಮೂಲಕ ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸಬೇಕು" ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಆನೇಕಲ್ ವಕೀಲರ ಸಂಘದ ಉಪಾಧ್ಯಕ್ಷ ಹರೀಶ್, ಪ್ರಧಾನ ಕಾರ್ಯದರ್ಶಿ ರವೀಶ್, ಖಜಾಂಚಿ ಶಾರದಾಮಣಿ, ಕಾರ್ಯಕಾರಿ ಸಮಿತಿ ಸದಸ್ಯರಾದ ನಾರಾಯಣಸ್ವಾಮಿ, ಸತೀಶ್ ಆರ್., ಪುರುಷೋತ್ತಮ್, ನಿರ್ಮಲಾ, ಲಕ್ಷ್ಮೀಸಂಪತ್, ತಿಮ್ಮರಾಜು, ಮುರಳಿ, ಮೋಹನ್, ನೀಲಮ್ಮ, ನಾಗರತ್ನ, ನಾಗರಾಜು, ಮೋಹನ್ ಕಾಂತ್, ಉದಯ್ ಕುಮಾರ್ ಸೇರಿದಂತೆ ಹಲವು ವಕೀಲರು ಭಾಗವಹಿಸಿದ್ದರು.