Перейти к содержимому

CEC Gyanesh Kumar Trouble: ಕೇರಳದಲ್ಲಿ ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಭ್ರಷ್ಟಾಚಾರ ತನಿಖೆಗೆ ಗ್ರೀನ್ ಸಿಗ್ನಲ್

TV5 Kannada

0:00 / 0:00

CEC Gyanesh Kumar Trouble: ಕೇರಳದಲ್ಲಿ ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಭ್ರಷ್ಟಾಚಾರ ತನಿಖೆಗೆ ಗ್ರೀನ್ ಸಿಗ್ನಲ್

2 554 просмотра · 6 ч назад
TV5 Kannada
2,73 млн подписчиков
2 554 просмотра · 6 ч назад
CEC Gyanesh Kumar Trouble: ಕೇರಳದಲ್ಲಿ ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಭ್ರಷ್ಟಾಚಾರ ತನಿಖೆಗೆ ಗ್ರೀನ್ ಸಿಗ್ನಲ್ ದೇಶಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಆಯೋಗದ ನಿರ್ಧಾರಗಳು ತೀವ್ರ ವಿವಾದಕ್ಕೆ ಗ್ರಾಸವಾಗಿರುವ ಬೆನ್ನಲ್ಲೇ, ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರಿಗೆ ಕೇರಳದಲ್ಲಿ ದೊಡ್ಡ ಮಟ್ಟದ ಕಾನೂನು ಸಂಕಷ್ಟ ಎದುರಾಗಿದೆ. ಸುಮಾರು ಎರಡು ದಶಕಗಳ ಹಿಂದಿನ, ಅಂದರೆ 2006ರ ಹಳೇ ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಮರುಜೀವ ನೀಡಲಾಗಿದ್ದು, ಕೇರಳ ರಾಜ್ಯ ರಸ್ತೆ ಸಾರಿಗೆ ಯೋಜನೆಗೆ (KSTP) ಸಂಬಂಧಿಸಿದಂತೆ ವಿಜಿಲೆನ್ಸ್ ತನಿಖೆಗೆ ಆದೇಶಿಸಲಾಗಿದೆ. 2006ರಲ್ಲಿ ಜ್ಞಾನೇಶ್ ಕುಮಾರ್ ಅವರು ಕೇರಳ ಸರ್ಕಾರದ ಲೋಕೋಪಯೋಗಿ ಇಲಾಖೆಯ (PWD) ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ, ವಿಶ್ವಬ್ಯಾಂಕ್ ನೆರವಿನಿಂದ ನಡೆದ ರಸ್ತೆ ಅಭಿವೃದ್ಧಿ ಕಾಮಗಾರಿಯಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಯೋಜನೆಗೆ ಸಂಬಂಧಿಸಿದಂತೆ ಮಲೇಷ್ಯಾ ಮೂಲದ ಪ್ರಾಜೆಕ್ಟ್ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಸಂದರ್ಭದಲ್ಲಿ ಬರೆದಿ ಡೆತ್‌ನೋಟ್‌ನಲ್ಲಿ ಜ್ಞಾನೇಶ್ ಕುಮಾರ್ ಅವರ ಹೆಸರು ಪ್ರಸ್ತಾಪವಾಗಿತ್ತು ಎಂಬ ಅಂಶ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ದೂರುದಾರರು ನೀಡಿದ ದೂರಿನ ಆಧಾರದ ಮೇಲೆ, ಅಂದು ಅರ್ಧದಲ್ಲೇ ನಿಂತುಹೋಗಿದ್ದ ತನಿಖೆಯನ್ನು ಮರುಪರಿಶೀಲಿಸಿ ಸಮಗ್ರ ತನಿಖೆ ನಡೆಸುವಂತೆ ಕೇರಳ ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳಕ್ಕೆ (VACB) ಸೂಚಿಸಲಾಗಿದೆ. ಪ್ರಸ್ತುತ ರಾಷ್ಟ್ರಮಟ್ಟದಲ್ಲಿ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿರುವ ಹೊತ್ತಿನಲ್ಲೇ, CEC ಜ್ಞಾನೇಶ್ ಕುಮಾರ್ ವಿರುದ್ಧ ಹಳೇ ಕೇಸ್ ಮುನ್ನೆಲೆಗೆ ಬಂದಿರುವುದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. Chief Election Commissioner (CEC) Gyanesh Kumar has landed in a major legal soup as the Kerala government ordered a fresh Vigilance and Anti-Corruption Bureau (VACB) inquiry into a nearly 20-year-old corruption and harassment case dating back to his tenure as the state PWD Secretary in 2006. The development follows complaints regarding irregularities and controversies tied to the World Bank-funded Kerala State Transport Project (KSTP), which had earlier drawn scrutiny following the tragic death of a project engineer. With opposition parties intensifying their nationwide political offensive against the poll panel's leadership, the revival of this legacy probe has added fresh fuel to ongoing institutional tensions. #GyaneshKumar #KeralaVigilanceProbe #ElectionCommission #KSTPProject #2006Case #CEC #KarnatakaPolitics #BreakingNewsKannada #tv5kannada #kannadanews #tv5kannadalive #tv5karnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬