ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ
DD Chandana News
0:00 / 0:00
ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ
1 305 просмотров · 3 дня назад
DD Chandana News
109 тыс. подписчиков
1 305 просмотров · 3 дня назад
ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಕೇಂದ್ರ ಸರ್ಕಾರ 2024ನೇ ಸಾಲಿನ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಿದೆ.
ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿ ಶಿಫಾರಸ್ಸಿನ ಅನ್ವಯ ಕೇಂದ್ರ ಸರ್ಕಾರ ಪ್ರಶಸ್ತಿ ಘೋಷಿಸಿದ್ದು, ಭಾರತೀಯ ಚಿತ್ರರಂಗಕ್ಕೆ ಅನಂತನಾಗ್ ಅವರು ನೀಡಿದ ಕೊಡುಗೆಯನ್ನು ಗುರುತಿಸಿ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
ಇದೇ ತಿಂಗಳ 22ರಂದು ಗುಜರಾತ್ ನ ಕೆವಾಡಿಯಾದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಂತನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲು ನಿರ್ಧರಿಸಲಾಗಿದೆ.
ಮೇರುನಟ ಡಾ. ರಾಜ್ ಕುಮಾರ್ ಅವರ ಬಳಿಕ ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸಂದಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಭಾರತೀಯ ಚಿತ್ರರಂಗದ ದಂತಕಥೆ ಅನಂತನಾಗ್ ಅವರಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಅನಂತನಾಗ್, ಹಲವು ದಶಕಗಳಿಂದ ವಿಭಿನ್ನ ಪಾತ್ರ ಮತ್ತು ಅಭಿನಯದ ಮೂಲಕ ಗಮನ ಸೆಳೆದಿರುವ ಬಹುಮುಖ ಪ್ರತಿಭೆ. ಭಾರತೀಯ ಚಿತ್ರರಂಗದಲ್ಲಿ ಅದರಲ್ಲೂ ಕನ್ನಡ ಚಿತ್ರರಂಗದಲ್ಲಿ ವಿಶೇಷ ಛಾಪು ನಿರ್ಮಿಸಿದ್ದಾರೆ.
ಅನಂತನಾಗ್ ಅವರು ನಿರ್ವಹಿಸಿದ ಯಾವುದೇ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅವರೊಬ್ಬ ಅಪರೂಪದ ಕಲಾವಿದ. ಇಂತಹ ಕಲಾವಿದನನ್ನು ಗೌರವಿಸುವುದು ಹೆಮ್ಮೆಯ ಸಂಗತಿ ಎಂದು ಹೇಳಿದ್ದಾರೆ.
ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರಾಜ್ಯ ಖಾತೆ ಸಚಿವ ಡಾ. ಎಲ್. ಮುರುಗನ್ ಸೇರಿದಂತೆ ಹಲವು ಕೇಂದ್ರ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.
ಸಚಿವ ಪ್ರಲ್ಹಾದ್ ಜೋಶಿ ಅವರು ಕೂಡ ಅಭಿನಂದನೆ ಸಲ್ಲಿಸಿ, ಭಾರತೀಯ ಸಿನಿರಂಗದ ಧ್ರುವತಾರೆ, ಕನ್ನಡಿಗರ ನೆಚ್ಚಿನ ನಟ ಅನಂತನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿಯಾದ ದಾದಾ ಸಾಹೇಬ್ ಫಾಲ್ಕೆ ಒಲಿದಿರುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ.
ಬೆಳ್ಳಿ ತೆರೆಯ ಮೇಲೆ ವೈವಿಧ್ಯಮಯ ಪಾತ್ರಗಳಿಗೆ ಸರಿಸಾಟಿ ಇಲ್ಲದೆ, ನೈಜತೆ ಹಾಗೂ ಅಪರೂಪದ ಗಾಂಭೀರ್ಯ ತಂದುಕೊಟ್ಟ ಮಹಾನ್ ಕಲಾಚೇತನ. ಪ್ರತಿಯೊಂದು ನಟನೆಯೂ ಭಾವನೆಗಳ ಅದ್ಭುತ ಕಾವ್ಯ. ಕನ್ನಡದ ಹಿರಿಮೆ-ಗರಿಮೆಯನ್ನು ದೇಶಮಟ್ಟದಲ್ಲಿ ಎತ್ತರಕ್ಕೆ ಏರಿಸಿದ ಶ್ರೇಷ್ಠ ಕಲಾವಿದನಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
#LiveDDChandanaNews #DDChandanaNews #DDChandana #DDKannada