Перейти к содержимому

ಕಿತ್ತೂರು ಕೋಟೆ | KITTUR FORT | BELAGAVI

Sanchari JS

0:00 / 0:00

ಕಿತ್ತೂರು ಕೋಟೆ | KITTUR FORT | BELAGAVI

6 174 просмотра · 4 г. назад
Sanchari JS
8,5 тыс. подписчиков
6 174 просмотра · 4 г. назад
ಕಿತ್ತೂರಿನ ಇತಿಹಾಸವು ಕ್ರಿ.ಶ. ೧೫೮೬ರಿಂದಲೇ ಆರಂಭವಾಗುತ್ತದೆ. ಮೂಲತಃ ಮಲೆನಾಡಿನ ಬೇಡ ಮನೆತನದಿಂದ ಬಂದ ಮಲ್ಲ ಹೆಸರಿನ ಸೋದರರಿಬ್ಬರು ವಿಜಾಪುರದ ಆದಿಲಶಾಹಿ ಸೈನ್ಯದಲ್ಲಿ ಸೇರಿಕೊಂಡಿದ್ದರು. ಈ ಸೋದರರಲ್ಲಿ ಹಿರಿಯ ಮಲ್ಲನಿಗೆ “ ಶಮಶೇರ ಜಂಗಬಹಾದ್ದೂರ " ಎನ್ನುವ ಬಿರುದನ್ನು ಹಾಗೂ ಹುಬ್ಬಳ್ಳಿ ವಿಭಾಗದ ಸರದೇಶಮುಖಿಯನ್ನು ನೀಡಲಾಗಿತ್ತು. ವಿಜಾಪುರದ ಪತನದ ನಂತರ ಕಿತ್ತೂರು ದೇಸಾಯಿಗಳು ತಮ್ಮ ರಕ್ಷಣೆಗಾಗಿ ಅನೇಕ ಕಾಳಗಗಳನ್ನು ಎದುರಿಸ ಬೇಕಾಯಿತು. ಬ್ರಿಟಿಷರು ಭಾರತದಲ್ಲಿ ಕಾಲೂರುವ ಸಮಯದಲ್ಲಿ ಇಲ್ಲಿಯ ರಾಜಕೀಯ ಪರಿಸ್ಥಿತಿ ಬಹಳ ವಿಲಕ್ಷಣವಾಗಿತ್ತು. ಉತ್ತರ ಹಿಂದುಸ್ಥಾನದಲ್ಲಿ ಮೊಗಲ ಬಾದಶಾಹಿ ನಿರ್ಬಲವಾಗಿತ್ತು. ದಕ್ಷಿಣದಲ್ಲಿ ಸ್ವರಾಜ್ಯದ ವಿಸ್ತರಣೆಗಾಗಿ ಹೋರಾಡುತ್ತಿದ್ದ ಪೇಶವಾಯಿ, ಆಕ್ರಮಣಕಾರಿ ಧೋರಣೆಯ ಹೈದರಾಬಾದಿನ ನಿಜಾಮಶಾಹಿ ಹಾಗು ಮೈಸೂರಿನ ಹೈದರ್ ಅಲಿ ಇವರೆಲ್ಲರ ನಡುವೆ ತಮ್ಮ ಉಳಿವಿಗಾಗಿ ಹೋರಾಡುತ್ತಿದ್ದ ಚಿಕ್ಕ ಪುಟ್ಟ ಪಾಳೆಗಾರರು. ಇಂತಹ ರಾಜಕೀಯ ಪರಿಸ್ಥಿತಿ ಧೂರ್ತ, ಕ್ರೂರ ಧೋರಣೆಯ ಬ್ರಿಟಿಷ ಈಸ್ಟ ಇಂಡಿಯಾ ಕಂಪನಿಗೆ ಸುವರ್ಣಾವಕಾಶವನ್ನು ಒದಗಿಸಿತ್ತು. ಇಂತಹ ಸಮಯದಲ್ಲಿ ಮಲ್ಲಸರ್ಜನ ದೊರೆಯನ್ನು ಟಿಪ್ಪು ಸುಲ್ತಾನನು ಸೆರೆ ಹಿಡಿದು ಕಪಾಲದುರ್ಗದಲ್ಲಿ ಸೆರೆಯಿಟ್ಟಿದ್ದನು. ಉಪಾಯದಿಂದ ತಪ್ಪಿಸಿಕೊಂಡ ದೊರೆ ೧೮೦೩ರಲ್ಲಿ ವೆಲ್ಲೆಸ್ಲಿಗೆ ನೆರವು ನೀಡಿ ಕಿತ್ತೂರನ್ನು ಭದ್ರ ಗೊಳಿಸಿದ್ದನು. ೧೮೦೯ರಲ್ಲಿ ಪೇಶವೆಯವರಿಗೆ ರೂ.೧,೭೫,೦೦೦ ಕೊಟ್ಟು, ಅವರ ಸ್ಥಾನಿಕ ಕಾವಲು ಸೈನ್ಯದ ಖರ್ಚನ್ನು ನೀಡಿ ಅವರಿಂದ ಸನದು ಪಡೆದಿದ್ದನು. ಆದರೆ ಪೇಶ್ವೆಯವರು ವಿಶ್ವಾಸಘಾತ ಮಾಡಿ ಮಲ್ಲಸರ್ಜನನ್ನು ಸೆರೆ ಹಿಡಿದು ೩ ವರ್ಷ ಕಾಲ ಪುಣೆಯಲ್ಲಿಟ್ಟರು. ೧೮೧೬ರಲ್ಲಿ ಬಿಡುಗಡೆ ಹೊಂದಿ ಮರಳುವಾಗ ದಾರಿಯಲ್ಲಿಯೆ ಮಲ್ಲಸರ್ಜನು ಕೊನೆಯುಸಿರನ್ನೆಳೆದ. ಅವನ ಮಗ ಶಿವಲಿಂಗ ರುದ್ರಸರ್ಜನು ಮರಾಠ ಹಾಗು ಟಿಪ್ಪು ಸುಲ್ತಾನ ಇವರ ಕಿರಿಕಿರಿ ತಪ್ಪಿಸಲು ಬ್ರಿಟಿಷರ ಜೊತೆಗೆ ಸ್ನೇಹದಿಂದಿದ್ದ. ಆದರೆ ಅದೆಂತಹ ಸ್ನೇಹವೆಂದರೆ! ಪ್ರತಿ ವರ್ಷ ರೂ. ೧,೭೦,೦೦೦ ಕಾಣಿಕೆ ಕೊಡುವ ಕರಾರಿನ ಮೇಲೆ ಬ್ರಿಟಿಷರು ಈ ದೊರೆಗೆ ಸನ್ನದು ನೀಡಿದರು. ಶಿವಲಿಂಗರುದ್ರ ಸರ್ಜನು ೧೧ ಸೆಪ್ಟೆಂಬರ ೧೮೨೪ ರಂದು ವಾರಸುದಾರರಿಲ್ಲದೆ ತೀರಿಕೊಂಡನು. ಈ ಎಳೆವಯಸ್ಸಿನ ದೊರೆಯ ಹೆಂಡತಿ ವೀರಮ್ಮನಿಗೆ ಆಗ ೧೧ ವರ್ಷ ವಯಸ್ಸು! ಮರಣದ ಪೂರ್ವದಲ್ಲಿ ಶಿವಲಿಂಗರುದ್ರಸರ್ಜ ಮಾಸ್ತಮರಡಿ ಗೌಡರ ಪುತ್ರ ಶಿವಲಿಂಗಪ್ಪನನ್ನು ದತ್ತಕ ತೆಗೆದುಕೊಂಡ. ಈ ದತ್ತಕವನ್ನು ಧಾರವಾಡದ ಕಲೆಕ್ಟರ ಥ್ಯಾಕರೆ ತಿರಸ್ಕರಿಸುತ್ತಾನೆ. ೧೩ ಸೆಪ್ಟೆಂಬರ ೧೮೨೪ ರಂದು ಥ್ಯಾಕರೆ ಸ್ವತಃ ಕಿತ್ತೂರಿಗೆ ಬಂದು ಕಂಪನಿ ಸರ್ಕಾರದಿಂದ ಮುಂದಿನ ಆದೇಶ ಬರುವವರೆಗೂ ತಾತ್ಕಾಲಿಕವಾಗಿ ಮಲ್ಲಪ್ಪಶೆಟ್ಟಿ ಹಾಗು ಹಾವೇರಿ ವೆಂಕಟರಾವ ಇವರನ್ನು ಸಂಸ್ಥಾನದ ವ್ಯವಹಾರ ನಿರ್ವಹಿಸಲು ನೇಮಕ ಮಾಡುತ್ತಾನೆ ಹಾಗು ಕಿತ್ತೂರಿನ ಭಂಡಾರಕ್ಕೆ ಬೀಗ ಮುದ್ರೆ ಹಾಕುತ್ತಾನೆ. ಆದರೆ ಇದನ್ನು ಕೆಚ್ಚೆದೆಯಿಂದ ಎದುರಿಸಿದವಳು ಮೃತ ಶಿವಲಿಂಗರುದ್ರಸರ್ಜನ ತಾಯಿ ಚೆನ್ನಮ್ಮ! #kitturu #kitturfort #ranichannamma #karnataka #kannada #sancharijs #kannadavlogs #kittur #kitturutsav #kings of Karnataka #bailhongal #belagavi #travelvlog #kannadanewvlog #newkannadayoutuber #kitturufort2022 #placesinbelagavi #history #freedomfighter #kalmath #kalamadhyam #forts #bijapurfort #historyofindia #sangollirayanna #sangollirayannaplace #rayannadjsongs #sangolli